ರಾಜ್ಯ ಸರ್ಕಾರ ಹೊಸ ವರ್ಷಕ್ಕೆ ಮಾತ್ರವಲ್ಲದೇ ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಜನ ಸೇರುವುದನ್ನು ಕಡಿವಾಣ ಹಾಕಲು ದೇವಸ್ಥಾನಗಳಿಗೂ ಕೆಲವು ನಿಯಮಗಳನ್ನು ಜಾರಿಗೊಳಿಸಿದೆ. ವೈಕುಂಠ ಏಕಾದಶಿ ದಿನ ಭಕ್ತರು ದೇವಸ್ಥಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚನೆ ನೀಡುವುದು,ದೇವಸ್ಥಾನದ ಪ್ರವೇಶ ದ್ವಾರಗಳಲ್ಲಿ ಸ್ಯಾನಿಟೈಸರ್ ಅಳವಡಿಸುವುದು, ಜನಜಂಗುಳಿ ತಡೆಯಲು ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವುದು ಹಾಗೂ ಸಂಕ್ರಾಂತಿ ಹಬ್ಬಕ್ಕೆ ಜನಜಂಗುಳಿ ತಡೆಯಲು ಈಗಿನಿಂದಲೇ