ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು ಹೊಸದಾಗಿ 14,366 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 38,23,833 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 35,87,022 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 58 ಮಂದಿ ಮೃತಪಟ್ಟಿದ್ದಾರೆ.ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,056 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 1,97,725 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ