ಬೆಂಗಳೂರು : ಸಿಎಂ ಬಸಬರಾಜ ಬೊಮ್ಮಾಯಿಯವರ ಚೊಚ್ಚಲ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ.ಇಂದು ಮಧ್ಯಾಹ್ನ 12.30ಕ್ಕೆ ಸಿಎಂ ತಮ್ಮ ಮೊದಲ ಪೂರ್ಣ ಬಜೆಟ್ ಮಂಡಿಸುತ್ತಿದ್ದು, ಹತ್ತು ಹಲವು ನಿರೀಕ್ಷೆಗಳನ್ನು ಹುಟ್ಟಿಸಿದೆ. ಈ ಬಜೆಟ್ ಸಿಎಂಗೂ, ಸರ್ಕಾರಕ್ಕೂ ಸವಾಲಿನ ಬಜೆಟ್ ಆಗಿದೆ.ರೈತಪರ, ಜನಪರ, ಜನಪ್ರಿಯ ಬಜೆಟ್ ಮಾಡುವ ಹುಮ್ಮಸ್ಸಿನಲ್ಲಿರೋ ಸಿಎಂ, ಎಲ್ಲ ವರ್ಗದವರಿಗೆ, ಎಲ್ಲ ವಲಯಗಳಿಗೆ ಮುಟ್ಟುವ ಬಜೆಟ್ ಮಾಡಬೇಕೆಂಬ ಹಂಬಲ ಹೊಂದಿದ್ದಾರೆ. ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಕೃಷಿ, ನೀರಾವರಿ, ಆರೋಗ್ಯ, ಮೂಲ