ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದೆ. ನಿನ್ನೆ 566 ಹೊಸ ಪ್ರಕರಣ ಪತ್ತೆಯಾಗಿತ್ತು.ಇಂದು ಒಟ್ಟು 707 ಕೇಸ್ ಮತ್ತು 3 ಮರಣ ಪ್ರಕರಣ ದಾಖಲಾಗಿದೆ. ಜೊತೆಗೆ ಓಮಿಕ್ರಾನ್ ಒಟ್ಟು ಪ್ರಕರಣಗಳ ಸಂಖ್ಯೆ 43ಕ್ಕೆ ಏರಿಕೆ ಕಂಡು ಆತಂಕ ಮೂಡಿಸಿದೆ.ಬೆಂಗಳೂರಿನಲ್ಲಿ ಕೊರೊನಾ ಸ್ಫೋಟಗೊಂಡಿದ್ದು, 565 ಮಂದಿಗೆ ಇಂದು ಕೊರೊನಾ ಬಂದಿದೆ. ಜೊತೆಗೆ ರಾಜ್ಯದಲ್ಲಿ ದಾಖಲಾದ ಮೂರು ಮರಣ ಪ್ರಕರಣ ಕೂಡ ಬೆಂಗಳೂರಿನಲ್ಲಿ ದಾಖಲಾಗಿದೆ.