ರಷ್ಯಾ-ಉಕ್ರೇನ್ ಯುದ್ಧ ಶುರುವಾಗಿ ಎರಡು ವಾರ ಸಮೀಪಿಸುತ್ತಿದೆ. ಯುದ್ಧ ನಿಲ್ಲಲಿ ಎಂಬುದು ಅನೇಕರ ಪ್ರಾರ್ಥನೆ. ವಿಶ್ವದ ಹಲವು ರಾಷ್ಟ್ರಗಳ ಒತ್ತಾಯ.ಏನೇ ಆದರೂ ಯುದ್ಧ ನಿಲ್ಲಿಸುವುದು ರಷ್ಯಾ ಅಧ್ಯಕ್ಷ ಪುಟಿನ್ ಕೈಯಲ್ಲೇ ಇದೆ ಎಂಬುದು ಪ್ರತಿಯೊಬ್ಬರಿಗೂ ಅರ್ಥವಾದ ಸತ್ಯ. ಈ ಮಧ್ಯೆ, ಹೇಗಾದರೂ ಸರಿ ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡುವವರ ಸಂಖ್ಯೆಯೂ ಹೆಚ್ಚಾಗಿದೆ.ಆ ಸಾಲಿಗೆ ಈಗ ಉಕ್ರೇನ್ ವಿದೇಶಾಂಗ ವ್ಯವಹಾರಗಳ ಸಚಿವ ಡಿಮಿಟ್ರೋ ಕುಲೆಬಾ