ಡೆಹ್ರಾಡೂನ್ : ದೇಶದಲ್ಲಿ ಟೊಮೆಟೋ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಅದೇ ರೀತಿ ಉತ್ತರಾಖಂಡದಲ್ಲಿ ಟೊಮೆಟೋ ಕೆಜಿಗೆ 200-250 ರೂ. ಆಗಿದ್ದು, ಬೆಲೆ ಏರಿಕೆಯಿಂದ ಗ್ರಾಹಕರು ಹೈರಾಣಾಗಿದ್ದಾರೆ. ಉತ್ತರಕಾಶಿಯಲ್ಲಿ ಟೊಮೆಟೋ ಅತ್ಯಂತ ದುಬಾರಿಯಾಗಿದ್ದು, ಗಂಗೋತ್ರಿ ಮತ್ತು ಯಮುನೋತ್ರಿಯಲ್ಲಿ ಕೆಜಿಗೆ 200-250 ರೂ. ಇದೆ. ಇದರಿಂದ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದು, ಟೊಮೆಟೋ ಖರೀದಿಸಲು ಮುಂದಾಗುತ್ತಿಲ್ಲ ಎಂದು ತರಕಾರಿ ಮಾರಾಟಗಾರ ರಾಕೇಶ್ ತಿಳಿಸಿದ್ದಾರೆ.ಕಳೆದ ವರ್ಷ ಸುರಿದ ಭಾರೀ ಮಳೆಯ ಪರಿಣಾಮ ಹಲವೆಡೆ