ನವದೆಹಲಿ : ಇಂಧನಗಳ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಕಡಿತಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳಿಗೆ ಮನವಿ ಮಾಡಿದ್ದಾರೆ.ಒಕ್ಕೂಟ ವ್ಯವಸ್ಥೆಗೆ ಸಹಕಾರಿಯಾಗಿ ಈ ಕ್ರಮಕೈಗೊಳ್ಳಬೇಕಿದೆ. ಈ ಮನೋಭಾವದಿಂದಾಗಿ ಕೋವಿಡ್ ವಿರುದ್ಧ ಸುದೀರ್ಘ ಹೋರಾಟ ನಡೆಸಲು ಸಾಧ್ಯವಾಯಿತು.ನಾನು ಯಾರನ್ನೂ ಟೀಕಿಸುತ್ತಿಲ್ಲ, ಚರ್ಚಿಸುತ್ತಿದ್ದೇನಷ್ಟೆ. ಕಾರಣಾಂತರಗಳಿಂದ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಜಾರ್ಖಂಡ್ ರಾಜ್ಯಗಳು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆ ಕಡಿತಗೊಳಿಸಲು ಒಪ್ಪಲಿಲ್ಲ. ಪರಿಣಾಮವಾಗಿ ಹೆಚ್ಚಿನ ಬೆಲೆಗಳ ಹೊರೆ