ಬೆಂಗಳೂರು : ಸಿಲಿಕಾನ್ ಸಿಟಿ ಈಗ ಕೂಲ್ ಕೂಲ್ ಆಗಿದೆ. ರಾಜಧಾನಿ ಸೇರಿದಂತೆ ಇಡೀ ರಾಜ್ಯ ಚಳಿಗಾಳಿಗೆ ತತ್ತರಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಸಂಜೆಯ ಹೊತ್ತಿಗೆ ಚಳಿಯ ಪ್ರಮಾಣ ಹೆಚ್ಚಾಗಲಿದ್ದು, 5 ದಿನ ಚಳಿಯೊಂದಿಗೆ ಮೋಡ ಕವಿದ ವಾತಾವರಣವೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಇನ್ನೂ ಮಾಂಡಸ್ ಚಂಡಮಾರುತ ಕರ್ನಾಟಕ ಮೂಲಕ ಅರಬ್ಬೀ ಸಮುದ್ರದ ಕಡೆ ಹೋಗಲಿದೆ. ಈ ಚಂಡಮಾರುತದ ಎಫೆಕ್ಟ್ ದಕ್ಷಿಣ ಜಿಲ್ಲೆಗಳಿಗೆ ಉಂಟಾಗಲಿದೆ.