ಗಾಂಧಿನಗರ : ಬಿಪರ್ ಜಾಯ್ ಚಂಡಮಾರುತ ಗುಜರಾತ್ನಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಗುರುವಾರ ಮಧ್ಯರಾತ್ರಿ ನಂತರ ಸೈಕ್ಲೋನ್ ಕಛ್ ಬಳಿ ತೀರವನ್ನು ಪೂರ್ಣಪ್ರಮಾಣದಲ್ಲಿ ದಾಟಿದ್ದು, ಕ್ರಮೇಣ ದುರ್ಬಲಗೊಳ್ತಿದೆ. ಸದ್ಯ ಚಂಡಮಾರುತ ಈಶಾನ್ಯ ದಿಕ್ಕಿನಲ್ಲಿ ಕರಾಚಿಯತ್ತ ತೆರಳುತ್ತಿದೆ. ಯಾವುದೇ ಕ್ಷಣದಲ್ಲಿ ಇದು ವಾಯುಭಾರ ಕುಸಿತವಾಗಿ ಬದಲಾಗಲಿದೆ. ಬಿಪರ್ ಜಾಯ್ ತೀರ ದಾಟುವ ಸಂದರ್ಭದಲ್ಲಿ 140 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಿದೆ.ಬಿರುಗಾಳಿ ಸಹಿತ ಭಾರೀ ಮಳೆ ದೊಡ್ಡ ಮಟ್ಟದಲ್ಲಿ ಅನಾಹುತ ಸೃಷ್ಟಿಸಿದೆ. ಅನೇಕ ಕಡೆ