ಎಸ್ಎಸ್ಎಲ್ಸಿ ಫಲಿತಾಂಶಕ್ಕೆ ಡೇಟ್ ಫಿಕ್ಸ್

Bangalore| Ramya kosira| Last Modified ಬುಧವಾರ, 21 ಜುಲೈ 2021 (07:40 IST)
ಬೆಂಗಳೂರು (ಜು.21): ಎಸ್ಎಸ್ಎಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದ್ದು, ಬರುವ ಆ.10ಕ್ಕೆ ಪರೀಕ್ಷೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.


•             ಎಸ್ಎಸ್ಎಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದ್ದು, ಬರುವ ಆ.10ಕ್ಕೆ ಪರೀಕ್ಷೆ ಫಲಿತಾಂಶ
•             ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
 
 ‘ಗುರುವಾರ ಭಾಷಾ ಪತ್ರಿಕೆಗಳ ಪರೀಕ್ಷೆ ಇದೆ. ಅದು ಸಹ ಯಾವುದೇ ಸಮಸ್ಯೆ ಇಲ್ಲದೇ ನಡೆಯಲಿದೆ ಎಂಬ ವಿಶ್ವಾಸ ಇದೆ’ ಎಂದರು.
SSLC ಮೊದಲ ದಿನ ಸುಸೂತ್ರ: 99.67% ವಿದ್ಯಾರ್ಥಿಗಳು ಪರೀಕ್ಷೆಗೆ!
 ಸೋಮವಾರ ಮೊದಲ ಪತ್ರಿಕೆ ಪರೀಕ್ಷೆ ಪೂರ್ಣಗೊಂಡಿದೆ. ಈ ವೇಳೆ ಯಾವುದೇ ಸಮಸ್ಯೆಯಾಗಿಲ್ಲ. ಇದು ಕೇವಲ ಶಿಕ್ಷಣ ಇಲಾಖೆಯ ಪರೀಕ್ಷೆಯಾಗಿರಲಿಲ್ಲ. ಸಮಾಜದ ಪರೀಕ್ಷೆಯಾಗಿದೆ. 58 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿವೆ. ಆ ಮಕ್ಕಳು ಬೇರೆ ಬೇರೆ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದರು
 




ಇದರಲ್ಲಿ ಇನ್ನಷ್ಟು ಓದಿ :