ಬೆಂಗಳೂರು : ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಹಂಪಿ ಉತ್ಸವ ಮುಂದಿನ ವರ್ಷ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.ರಾಜ್ಯದಲ್ಲಿ ವಿಜಯನಗರ-ಬಳ್ಳಾರಿ ಸೇರಿದಂತೆ ಬಹುತೇಕ ಜಿಲ್ಲೆಗಳ ಹೆಚ್ಚಿನ ಸಂಖ್ಯೆಯ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಹೀಗಾಗಿ ಇಂತಹ ಸ್ಥಿತಿಯಲ್ಲಿ ಉತ್ಸವ ನಡೆಸುವುದು ಕಷ್ಟ.