ಬೆಂಗಳೂರು : ಪರಿಷತ್ಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಬೆನ್ನಲ್ಲೇ ಆಂತರಿಕ ಬೇಗುದಿ ಹೊರಬಿದ್ದಿದೆ. ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಲಾಗದೇ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಹೈಕಮಾಂಡ್ ನಿರಾಸೆ ಮಾಡಿದೆ.ತಮ್ಮ ಬೆಂಬಲಿಗರಿಗೆ ಅವಕಾಶ ಕೊಡಬೇಕೆಂದು ಪಟ್ಟು ಹಿಡಿದಿದ್ದ ಉಭಯ ನಾಯಕರಿಗೆ ಹೈಕಮಾಂಡ್ ಕ್ಯಾರೆ ಅಂದಿಲ್ಲ. ತಮ್ಮದೇ ಲೆಕ್ಕಚಾರದಡಿ ಟಿಕೆಟ್ ಘೋಷಿಸಿರುವ ವರಿಷ್ಠರು ಪಕ್ಷನಿಷ್ಠರಿಗೆ ಮನ್ನಣೆ ಹೊರತು ಗುಂಪುಗಾರಿಕೆಗೆ ಅವಕಾಶ ಇಲ್ಲ ಎಂಬ ಸಂದೇಶ ರವಾನಿಸಿದೆ. ಇತ್ತೀಚೆಗೆ ಪರಿಷತ್ನಿಂದ