ಬೆಂಗಳೂರು : ನನ್ನ ಸರ್ಕಾರ ಬಜೆಟ್ ಘೋಷಿತ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಧೋರಣೆ ಸಹಿಸುವುದಿಲ್ಲ.ನೀವೆಲ್ಲರೂ ನನ್ನ (ರಡಾರ್) ಕಣ್ಗಾವಲಿನಲ್ಲಿ ಇದ್ದೀರಿ. ನಿಮ್ಮೆಲ್ಲರನ್ನು ನಾನು ಗಮನಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಬೆಂಗಳೂರಿನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಸಿಇಒಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನೀವೆಲ್ಲರೂ ಯುವಕರಿದ್ದೀರಿ.ಒಳ್ಳೆಯ ಕೆಲಸ ಮಾಡಲು ದೇವರು ನಿಮಗೆ ಇದೊಂದು ಅವಕಾಶ ನೀಡಿದ್ದಾನೆ.