ನವದೆಹಲಿ : ದೀಪಾವಳಿ ಮತ್ತು ದಸರಾ ಸಮೀಸುತ್ತಿರುವ ಹಿನ್ನಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಚಳಿಗಾಲದಲ್ಲಿ ಮಾಲಿನ್ಯದ ಪ್ರಮಾಣ ತಗ್ಗಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದೆಹಲಿ ಸರ್ಕಾರದ ಪರಿಸರ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ದೆಹಲಿ ಸರ್ಕಾರ ಈ ಪದ್ಧತಿ ಜಾರಿ ಮಾಡುತ್ತಾ ಬರುತ್ತಿದೆ. ಈ ವಿಚಾರವಾಗಿ ನಗರದಾದ್ಯಂತ