ನವದೆಹಲಿ, ಆಗಸ್ಟ್ 19: ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ದೇಹದಲ್ಲಿ ಪ್ರತಿಕಾಯ ಸೃಷ್ಟಿಗೆ ಕೊರೊನಾ ಲಸಿಕೆಗಳನ್ನು ನೀಡಲಾಗುತ್ತಿದೆ. ಆದರೆ ಲಸಿಕೆ ಪಡೆದುಕೊಂಡವರಲ್ಲೂ ಮತ್ತೆ ಸೋಂಕು ಪತ್ತೆಯಾಗುತ್ತಿದೆ. ಚೆನ್ನೈನಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಈ ಕುರಿತು ಅಧ್ಯಯನವೊಂದನ್ನು ನಡೆಸಿದ್ದು, ಕೊರೊನಾ ಲಸಿಕೆ ಪಡೆದವರು ಹಾಗೂ ಲಸಿಕೆ ಪಡೆಯದವರು ಈ ಎರಡು ವರ್ಗಕ್ಕೂ ತಾಗಬಲ್ಲಷ್ಟು ಡೆಲ್ಟಾ ರೂಪಾಂತರ ಸೋಂಕು ಬಲಿಷ್ಠವಾಗಿದೆ ಎಂದು ತಿಳಿಸಿದೆ. ಲಸಿಕೆ ಪಡೆದವರಿಗೂ ಡೆಲ್ಟಾ ರೂಪಾಂತರ ಸೋಂಕು ತಗುಲಿದ