ಮಂಗಳೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭರವಸೆ ಉಳಿಸಿಕೊಳ್ಳಲು ವಿಫಲವಾಗಿದೆ ಎಂದು ಇತ್ತೀಚೆಗೆ ಪೇಜಾವರ ಶ್ರೀಗಳು ನೀಡಿದ್ದ ಹೇಳಿಕೆ ರಾಜ್ಯ ಬಿಜೆಪಿಗೆ ಮುಜುಗರವಾಯಿತೇ?ಇದೀಗ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಪೇಜಾವರ ಶ್ರೀಗಳ ಹೇಳಿಕೆಗೆ ತೇಪೆ ಹಚ್ಚುವ ಕೆಲಸ ಮಾಡಿರುವುದನ್ನು ಗಮನಿಸಿದರೆ ಹಾಗೆಯೇ ಅನಿಸುತ್ತಿದೆ.ಮಂಗಳೂರಿನಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ಪೇಜಾವರ ಶ್ರೀಗಳು ಸನ್ಯಾಸಿಗಳು. ಅವರಿಗೆ ರಾಜಕೀಯ ಗೊತ್ತಿಲ್ಲ. ಮಾಹಿತಿ ಕೊರತೆಯಿಂದ ಈ ರೀತಿ ಮಾತನಾಡಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಬಿಜೆಪಿ