ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜರ್ಮನಿಯಲ್ಲಿ ನಡೆದ ಸಂವಾದ ಕಾರ್ಯಕ್ರಮವೊಂದರಲ್ಲಿ ಐಸಿಸ್ ಉಗ್ರರನ್ನು ಸಮರ್ಥಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.ಅಭಿವೃದ್ಧಿ ವಿಚಾರದಲ್ಲಿ ಮೋದಿ ಸರ್ಕಾರವನ್ನು ಟೀಕಿಸುವ ಭರದಲ್ಲಿ ರಾಹುಲ್ ಐಸಿಸ್ ಉಗ್ರ ಸಂಘಟನೆಯನ್ನು ಸಮರ್ಥಿಸಿದರು ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ರಾಹುಲ್ ಕ್ಷಮೆ ಯಾಚಿಸಬೇಕು ಎಂದೂ ಬಿಜೆಪಿ ಆಗ್ರಹಿಸಿದೆ.ಅಭಿವೃದ್ಧಿ ಕೆಲಸಗಳಿಂದ ಬಹುದೊಡ್ಡ ಪ್ರಮಾಣದ ಜನರನ್ನು ದೂರವಿಡುವುದರಿಂದ ಐಸಿಸ್ ನಂತಹ ಉಗ್ರ ಸಂಘಟನೆಗಳು ಹುಟ್ಟಿಕೊಳ್ಳುತ್ತವೆ ಎಂದು ರಾಹುಲ್ ಗಾಂಧಿ ನೀಡಿದ