ಬೆಂಗಳೂರು (ಜು.15): ರಾಜ್ಯದ 1ರಿಂದ 8ನೇ ತರಗತಿ ವರೆಗಿನ ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ 2021ರ ಮೇ ಮತ್ತು ಜೂನ್ ತಿಂಗಳ ಬೇಸಿಗೆ ರಜೆಯ ಆಹಾರ ಭದ್ರತಾ ಭತ್ಯೆಯ ಪರಿವರ್ತನಾ ವೆಚ್ಚವನ್ನು (ಕುಕಿಂಗ್ ಕಾಸ್ಟ್) ನಗದು ರೂಪದಲ್ಲಿ ನೀಡಲು ಸರ್ಕಾರ ನಿರ್ಧರಿಸಿದೆ.ಈ ಸಂಬಂಧ ನಗದನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ನೇರ ವರ್ಗಾವಣೆಗೆ ತೀರ್ಮಾನಿಸಿದ್ದು, ಸಂಬಂಧಿಸಿದ ಎಲ್ಲ ಮಕ್ಕಳ ಬ್ಯಾಂಕ್ ಖಾತೆಗಳ ಮಾಹಿತಿ ಸಂಗ್ರಹಿಸಿ ನೀಡುವಂತೆ ರಾಜ್ಯದ ಎಲ್ಲಾ