ದಾವಣಗೆರೆ: ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಸವರಾಜ್ ನಾಯ್ಕ ಅವರಿಗೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ನಿರಾಕರಿಸಿದೆ ಎನ್ನುವ ವದಂತಿ ಹರಡುತ್ತಿದ್ದಂತೆ ಬೆಂಬಲಿಗರು ಟೈರ್ಗಳಿಗೆ ಬೆಂಕಿ ಹಚ್ಚಿ ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗಿದ ಘಟನೆ ವರದಿಯಾಗಿದೆ.