ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಅತಂತ್ರ ಪರಿಸ್ಥಿತಿ ಬಂದ ಬಳಿಕ ಸರ್ಕಾರ ರಚಿಸಲು ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ನಡುವೆ ಕಸರತ್ತು ಮುಂದುವರಿದಿದೆ.ಜೆಡಿಎಸ್ ಜತೆ ಸೇರಿಕೊಂಡು ಕಾಂಗ್ರೆಸ್ ಸರ್ಕಾರ ರಚಿಸಲು ಹೊರಟ ಬೆನ್ನಲ್ಲೇ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ ಇದೀಗ ಕಾಂಗ್ರೆಸ್, ಜೆಡಿಎಸ್ ಪಾಳಯದ ಶಾಸಕರಿಗೆ ಗಾಳ ಹಾಕಲು ಹೊರಟಿದೆ.ಇದರ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ನಮಗೂ ರಾಜಕಾರಣ ಮಾಡಲು ಗೊತ್ತಿದೆ. ಬಿಜೆಪಿಯವರು ಕಾಂಗ್ರೆಸ್ ನ ಎಲ್ಲಾ ಶಾಸಕರಿಗೂ ಕರೆ ಮಾಡಿದ್ದಾರೆ.