ಬೆಂಗಳೂರು: ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬರಲು ಪ್ರಧಾನ ಪಾತ್ರ ವಹಿಸಿದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಡಿಕೆ ಶಿವಕುಮಾರ್ ಒಂದೊಮ್ಮೆ ಉಪಮುಖ್ಯಂತ್ರಿ ಸ್ಥಾನಕ್ಕೇ ಪಟ್ಟು ಹಿಡಿದಿದ್ದರು. ಆದರೆ ಇದೀಗ ಬೇಡಿದ ಖಾತೆ ಸಿಗದೇ ನಿರಾಶರಾಗಿದ್ದಾರೆಯೇ?ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಾರ್ಯ ಬಹುತೇಕ ಅಂತಿಮಗೊಂಡಿದೆ. ಆದರೆ ಡಿಕೆ ಶಿವಕುಮಾರ ಉಪಮುಖ್ಯಮಂತ್ರಿ ಸ್ಥಾನ ಕೊಡದಿದ್ದರೆ ಹಣಕಾಸು ಅಥವಾ ಇಂಧನ ಖಾತೆಗೆ ಬೇಡಿಕೆ ಇಟ್ಟಿದ್ದರು. ಆದರೆ ಇವೆರಡೂ ಈಗ ಜೆಡಿಎಸ್ ಪಾಲಾಗಿವೆ.ಹೀಗಾಗಿ ಡಿಕೆಶಿ ಅಸಮಾಧಾನಗೊಂಡಿದ್ದಾರೆಯೇ?