ಬೆಂಗಳೂರು : ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕುವುದು ಸರಿಯಲ್ಲ ಎಂದು ಖ್ಯಾತ ವೈದ್ಯ ಹಾಗೂ ಕೋವಿಡ್ ನಿಗ್ರಹ ಕಾರ್ಯದಿಂದ ರಾಷ್ಟ್ರದ ಗಮನ ಸೆಳೆದ ಡಾ. ಅನಿಲ್ ಕುಮಾರ್ ಅವುಲಪ್ಪ ಅಭಿಪ್ರಾಯಪಟ್ಟರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಕೋವಿಡ್ ಸಂದರ್ಭದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಜ್ಞ ವೈದ್ಯರ ಜೊತೆಗಿನ ಸಂವಾದ ಸರಣಿಯಲ್ಲಿ ಮೂರನೇ ಅಲೆಯ ಆತಂಕದ ಬಗ್ಗೆ ಡಾ.ಅನಿಲ್ಕುಮಾರ್ ಮಾತನಾಡಿದರು.ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಪ್ರಕೃತಿ ಸಹಜವಾಗಿಯೇ ಹೆಚ್ಚಿರುತ್ತದೆ. ಮಕ್ಕಳಿಗೆ ಲಸಿಕೆ ಹಾಕುವುದನ್ನು