ಬೆಂಗಳೂರು : ಶಾಸಕ ಆನಂದ್ ಸಿಂಗ್ ಅವರು ಯಾರ ಸಂಪರ್ಕಕ್ಕೂ ಸಿಗದ ಹಿನ್ನಲೆಯಲ್ಲಿ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶಾಸಕ ಆನಂದ್ ಸಿಂಗ್ ಅವರನ್ನು ಬಿಜೆಪಿಯವರು ಐಟಿ, ಇಡಿ ದಾಳಿ ಬೆದರಿಕೆ ಒಡ್ಡಿ ಅಪಹರಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ. ನಗರದ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆನಂದ್ ಸಿಂಗ್ ಅವರನ್ನು ಅಪಹರಿಸಿ ಕೂಡಿಡಲಾಗಿದೆ. ಆದರೆ ಅವರು ವಿಧಾನಸೌಧಕ್ಕೆ ಬರುವ ವಿಶ್ವಾಸವಿದೆ. ಬಂದರೆ ನಮ್ಮ ಪಕ್ಷಕ್ಕೆ ಬೆಂಬಲಕ್ಕೆ