ನವರಾತ್ರಿ ಇದು ದೇವಿಯನ್ನು ಆರಾಧಿಸುವ ಹಿಂದೂ ಧರ್ಮದ ಹಬ್ಬ. ಇದನ್ನು ಕರ್ನಾಟಕದಲ್ಲಿ ದಸರ ಎಂದು ಕರೆಯಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಈ ಹಬ್ಬವನ್ನು ದುರ್ಗಾ ಪೂಜಾ ಎಂದು ಆಚರಿಸಲಾಗುತ್ತದೆ. ನವರಾತ್ರಿಯೆಂದರೆ ಒಂಬತ್ತು (ನವ) ರಾತ್ರಿಗಳು, ದೇವಿಯ ಒಂಬತ್ತು ವಿಧದ ರೂಪಗಳನ್ನು ಆರಾಧಿಸಲಾಗುತ್ತದೆ.ಹತ್ತನೇಯ ದಿನ ವಿಜಯ ದಶಮಿ, ಈ ದಿನ ಶಮಿವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮಿ (ಬನ್ನಿ)ಯನ್ನು ವಿನಿಯೋಗ ಮಾಡುವದು ಕರ್ನಾಟಕದ ಆಚರಣೆಯ ಪದ್ಧತಿ. ಇದೇ ದಿನ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿಯ