ಬ್ರಿಟನ್, ಸೆ11: ಬಲಿಷ್ಠವಾಗಿರುವ ಕೊರೊನಾ ರೂಪಾಂತರಗಳ ವಿರುದ್ಧ ಹೋರಾಟಕ್ಕೆ ಕೊರೊನಾ ಲಸಿಕೆಯ ಬೂಸ್ಟರ್ ಡೋಸ್ ನೀಡುವ ಕುರಿತು ಜಾಗತಿಕವಾಗಿ ಚರ್ಚೆಗಳು ನಡೆಯುತ್ತಿವೆ. ಬ್ರಿಟನ್ನಲ್ಲಿಯೂ ಬೃಹತ್ ಮಟ್ಟದಲ್ಲಿ ಬೂಸ್ಟರ್ ಡೋಸ್ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಆದರೆ ಇದರ ಅಗತ್ಯವಿಲ್ಲ ಎನ್ನುತ್ತಿದ್ದಾರೆ ಬ್ರಿಟನ್ ತಜ್ಞರು. ಎರಡು ಡೋಸ್ಗಳ ಸಂಪೂರ್ಣ ಲಸಿಕೆ ಪಡೆದವರಲ್ಲಿ ರೋಗನಿರೋಧಕ ಶಕ್ತಿ ದೀರ್ಘಕಾಲ ಉಳಿಯುವುದರಿಂದ ಎಲ್ಲರಿಗೂ ಬೂಸ್ಟರ್ ಡೋಸ್ ನೀಡುವ ಅಗತ್ಯವಿಲ್ಲವೇ ಇಲ್ಲ ಎಂದು ಬೂಸ್ಟರ್ ಡೋಸ್ ಅಭಿವೃದ್ಧಿಪಡಿಸುತ್ತಿರುವ ಆಕ್ಸ್ಫರ್ಡ್