18 ರಿಂದ 59 ವರ್ಷ ವಯೋಮಾನದವರು ಬೂಸ್ಟರ್ ಡೋಸ್ ಕೊರೋನಾ ಲಸಿಕೆ ಪಡೆಯಲು ನೀರಸ ಪ್ರತಿಕ್ರಿಯೆ ತೋರುತ್ತಿರಲು ಮುಖ್ಯ ಕಾರಣ 2ನೇ ಡೋಸ್ ಮತ್ತು ಮುನ್ನೆಚ್ಚರಿಕಾ ಡೋಸ್ ಲಸಿಕೆ ನಡುವೆ 9 ತಿಂಗಳ ಅಂತರವಿರುವುದು ಕಾರಣ.ಇದಲ್ಲದೆ ಕೋವಿಡ್ ಹೋಗಿದೆ ಎಂಬ ಉದಾಸೀನವೂ ಕಾರಣ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಬೂಸ್ಟರ್ ಡೋಸ್ ಬಗ್ಗೆ ನಿರ್ಲಕ್ಷ್ಯ ಬೇಡ ಎಂದೂ ಎಚ್ಚರಿಸಿದ್ದಾರೆ.ಎರಡು ಡೋಸ್ ಲಸಿಕೆ ಪಡೆದ ನಾಲ್ಕೈದು ತಿಂಗಳ ಬಳಿಕ ಪ್ರತಿಕಾಯ ಶಕ್ತಿ