ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು, ಮಾರ್ಚ್ ಮಧ್ಯಭಾಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪ್ರವೇಶ ಪತ್ರವನ್ನು ಫೆ.28ರಿಂದ ಜಾಲತಾಣದಲ್ಲಿ ಡೌನ್-ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.ಅಲ್ಲದೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನೂ ನಿಗಧಿಪಡಿಸಿದ್ದು, ನಿಷೇಧಿತ ವಸ್ತುಗಳ ಪಟ್ಟಿಯನ್ನೂ ತಿಳಿಸಲಾಗಿದೆ. ಪರೀಕ್ಷೆಯು ಮಾರ್ಚ್ 12 ರಿಂದ 16ರವರೆಗೆ