ಬೆಂಗಳೂರು : ರಾಜ್ಯದ ಬಹುತೇಕ ಕಡೆ ಮಳೆ ಅಬ್ಬರಿಸುತ್ತಿದೆ. ಅದರಲ್ಲೂ ಕಳೆದ 10 ದಿನಗಳಿಂದ ಕರಾವಳಿ ಭಾಗದಲ್ಲಿ ವರುಣ ಆರ್ಭಟಿಸುತ್ತಿರುವ ಕಾರಣ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ಉಡುಪಿಯಲ್ಲಿ ಪಾಪನಾಶಿನಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮಠದ ಕುದ್ರು, ವಿಭುದೇಶ ತೀರ್ಥ ನಗರಕ್ಕೆ ನೀರುನುಗ್ಗಿದೆ. ಮಳೆ ನೀರಲ್ಲಿ ನಾಯಿಗಳು ಪರದಾಡಿವೆ. ಜನ ದೋಣಿ ಅವಲಂಬಿಸಿದ್ದಾರೆ. ಬೆಳ್ಳಾಲ, ನಂದ್ರೊಳ್ಳಿ ಕ್ಷೇತ್ರಪಾಲದಲ್ಲಿ ಮನೆ, ಉಪ್ಪುಂದದಲ್ಲಿ ಶಾಲಾ ಮೇಲ್ಛಾವಣಿ ಕುಸಿದಿವೆ.ದಕ್ಷಿಣ ಕನ್ನಡದ ಮೊಗೆರ್ ಕುದ್ರುನಲ್ಲಿ ನೆರೆ ಇಳಿದಿಲ್ಲ.