ಬೆಂಗಳೂರು, ಸೆ 20 : ಕೇಂದ್ರದ ಮಾಜಿ ಸಚಿವ ಡಿ. ವಿ ಸದಾನಂದ ಗೌಡ ಅವರು ಸೈಬರ್ ಕ್ರೈಂ ಪೊಲೀಸರಿಗೆ ಇಂದು ದೂರು ನೀಡಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ, ಈ ವಿಡಿಯೋದಲ್ಲಿರುವುದು ನಾನಲ್ಲ ಎಂದು ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲ ತಾಣಗಳು, ವಾಟ್ಸಾಪ್ ಗಳಲ್ಲಿ ಹಂಚಿಕೆಯಾಗುತ್ತಿರುವ ವಿಡಿಯೋ ಕಾಲ್ ವಿಡಿಯೋದಲ್ಲಿರುವ ವ್ಯಕ್ತಿಯ ಮುಖ ನನ್ನ ಮುಖದಂತೆ ಕಾಣುವಂತೆ ಮಾರ್ಫ್ ಮಾಡಲಾಗಿದೆ,