ಬೆಂಗಳೂರು : ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆಯನ್ನು ಘೋಷಣೆ ಮಾಡಿದೆ. ಡಿಸೆಂಬರ್ 27 ರಂದು ಮತದಾನ ನಡೆದರೆ ಡಿಸೆಂಬರ್ 30 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 2016 ನೇ ಸಾಲಿನಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲಾದ 51 ನಗರ ಸ್ಥಳೀಯ ಸಂಸ್ಥೆಗಳ ಅವಧಿಯು 2021 ಗೆ ಮುಕ್ತಾಯಗೊಳ್ಳಲಿದೆ. ಕ್ಷೇತ್ರ ವಿಂಗಡನೆ ಮಾಡಿ, ವಾರ್ಡ್ ವಾರು ಮೀಸಲಾತಿಯನ್ನು ನಿಗದಿಪಡಿಸಲು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. 5