ಬೆಂಗಳೂರು : ಗ್ರಾಮೀಣ ಭಾಗದ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಪರಿಹಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಗ್ರಾಹಕರಿಗೆ ಮಾಹಿತಿ ನೀಡಲು ‘ವಿದ್ಯುತ್ ಅದಾಲತ್’ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 104 ಹಳ್ಳಿಗಳಲ್ಲಿ ಶನಿವಾರ(ಜೂನ್ 18) ನಡೆಯಲಿದೆ.ಬೆಸ್ಕಾಂನ ಆಡಳಿತ ನಿರ್ದೇಶಕರಿಂದ ಹಿಡಿದು ಹಿರಿಯ ಅಧಿಕಾರಿಗಳು ವಿದ್ಯುತ್ ಅದಾಲತ್ನಲ್ಲಿ ಖುದ್ದು ಭಾಗವಹಿಸಿ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸಲಿದ್ದಾರೆ. ಇದರೊಂದಿಗೆ ಕಾಲಮಿತಿಯಲ್ಲಿ ವಿದ್ಯುತ್ ಸಮಸ್ಯೆಗಳಿಗೆ ಪರಿಹಾರವನ್ನೂ ಒದಗಿಸಲಿದ್ದಾರೆ.ಗ್ರಾಮೀಣ ಭಾಗದ ಜನರ