ಮೈಸೂರು, ಅ 05 : ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಅಕ್ಟೋಬರ್ 5ರಿಂದ ಭಕ್ತರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅಕ್ಟೋಬರ್ 6ರಂದು ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಇನ್ನು ಅಕ್ಟೋಬರ್ 7ರಂದು ವಿಶ್ವವಿಖ್ಯಾತ ಮೈಸೂರು ದಸರಾ 2021ರ ಉದ್ಘಾಟನಾ