ಬೆಂಗಳೂರು : ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಹೊಸದಾಗಿ ವಯೋಮಿತಿ ನಿಗದಿ ಮಾಡಿರುವ ಸರ್ಕಾರದ ಆದೇಶ ಹಲವು ಗೊಂದಲಗಳಿಗೆ ಕಾರಣವಾಗಿದೆ.ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಗೆ ಸೇರ್ಪಡೆ ಆಗಬೇಕಾದರೆ ಕಡ್ಡಾಯವಾಗಿ ವಿದ್ಯಾರ್ಥಿಗೆ 6 ವರ್ಷ ತುಂಬಿರಬೇಕು ಎಂದು ಆದೇಶ ಹೊರಡಿಸಿತ್ತು.ಒಂದನೇ ತರಗತಿಗೆ ದಾಖಲಾತಿ ಆಗಬೇಕದರೆ ಜೂನ್ 1ಕ್ಕೆ 6 ವರ್ಷ ತುಂಬಿರಬೇಕು ಎಂದು ಆದೇಶದಲ್ಲಿ ಉಲ್ಲೇಖ ಮಾಡಿರುವುದು ಗೊಂದಲಗಳಿಗೆ ಕಾರಣವಾಗಿದೆ.ಆದೇಶದಲ್ಲಿ ಆರ್ಟಿಇ