ಬೆಂಗಳೂರು(ಅ.09) : ರಾಜ್ಯದಲ್ಲಿ ಮಳೆ ಆರ್ಭಟ ನಿಲ್ಲುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿಯಾಗುವ ಸಂಭವವಿದ್ದು,ಕರ್ನಾಟಕ ಸೇರಿ ಕೆಲವು ರಾಜ್ಯಗಳಲ್ಲಿ ಅಕ್ಟೋಬರ್ 12ರವರೆಗೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ ಉತ್ತರ ಅಂಡಮಾನ್ ಸಮುದ್ರದಲ್ಲಿ ಅಕ್ಟೋಬರ್ 10ರ ವೇಳೆಗೆ ವಾಯುಭಾರ ಕುಸಿತ ಉಂಟಾಗಲಿದ್ದು, ಇದರ ಪರಿಣಾಮ ದೇಶದ