ವಿಜಯಪುರ: ಬಿಜೆಪಿ ರಾಜ್ಯ ನಾಯಕರ ವಿರುದ್ಧ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅಸಮಾಧಾನ ಹೊರಗೆ ಹಾಕಿದ್ದಾರೆ. ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ನೋವಾಗಿದೆ. ಜಿಲ್ಲಾ ಬಿಜೆಪಿ ಮುಖಂಡರ ಗಮನಕ್ಕೆ ಬಾರದಂತೆ, ನಮ್ಮ ಜೊತೆ ಚರ್ಚೆ ಮಾಡದೇ ನಮಗೆ ಮಾಹಿತಿಯೂ ಕೊಡದೇ ಯಾರ ಯಾರನ್ನೋ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.