ಬೆಂಗಳೂರು : ಲಾಕ್ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಸರ್ಕಾರ ಘೋಷಣೆ ಮಾಡುವವರೆಗೂ ಲಾಕ್ಡೌನ್ ಮಾಡಲ್ಲ ಎಂದು ಸ್ಪಷ್ಟಪಡಿಸಿದರು. ಲಾಕ್ಡೌನ್ ಬಗ್ಗೆ ಜನರನ್ನು ತಪ್ಪುದಾರಿಗೆ ಎಳೆಯಬಾರದು ಎಂದು ತಾಕೀತು ಮಾಡಿದರು. ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಮಂಗಳವಾರ ತಜ್ಞರ ಜೊತೆ ಸಭೆ ನಡೆಸಲಾಗುವುದು. ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಭೆ