ವಾಷಿಂಗ್ಟನ್ : ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮದಿಂದ ಹಾಗೂ ಕೋವಿಡ್ ಪ್ರಭಾವದಿಂದ ಇಡೀ ವಿಶ್ವವೇ ನಲುಗಿ ಹೋಗಿ, ಆರ್ಥಿಕತೆ ಕುಗ್ಗುವ ಆತಂಕದಲ್ಲಿದೆ.ಆದರೆ ಭಾರತದ ಆರ್ಥಿಕತೆಯಲ್ಲಿ ಭಾರೀ ಪ್ರಮಾಣದ ಚೇತರಿಕೆ ಕಾಣುತ್ತಿದೆ. ಹೌದು, ಭಾರತ ಇದೀಗ ಚೀನಾವನ್ನೇ ಮೀರಿಸುವಷ್ಟು ವೇಗವಾಗಿ ಆರ್ಥಿಕತೆಯಲ್ಲಿ ಅಭಿವೃದ್ದಿ ಹೊಂದುತ್ತಿದೆ. 2022ನೇ ಇಸವಿಯಲ್ಲಿ ಭಾರತ ಶೇ.8.2 ರಷ್ಟು ಪ್ರಗತಿ ಕಾಣಲಿದೆ.ಇದು ಜಗತ್ತಿನಲ್ಲಿಯೇ ಅತೀ ವೇಗದ ಅಭಿವೃದ್ಧಿ ಹೊಂದಲಿರುವ ಆರ್ಥಿಕತೆ ಎನಿಸಿಕೊಳ್ಳಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ತಿಳಿಸಿದೆ. ಚೀನಾದ