ಜೆಡಿಎಸ್- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಜೆಡಿಎಸ್ ಕಾರ್ಯಕರ್ತ ರಾಮರೆಡ್ಡಿ (27) ಸಾವನ್ನಪ್ಪಿದ್ದಾರೆ. ಮತ್ತೋರ್ವ ಜೆಡಿಎಸ್ ಕಾರ್ಯಕರ್ತ ನರೇಂದ್ರ ಸ್ಥಿತಿ ಚಿಂತೆ ಜನಕವಾಗಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ನರೇಂದ್ರನನ್ನ ದೊಡ್ಡಬಳ್ಳಾಪುರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೌರಿಬಿದನೂರು ತಾಲ್ಲೂಕಿನ ಕೋಟಾಲದಿನ್ನೆಯ ಬಾರ್ ಬಳಿ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಲಾಂಗ್ ಮಚ್ಚುಗಳಿಂದ ಕಾಂಗ್ರೆಸ್ ಬೆಂಬಲಿತ ರೌಡಿಶೀಟರ್ ರಮೇಶ್ ನಿಂದ ಜೆಡಿಎಸ್ ಕಾರ್ಯಕರ್ತರ ಮೇಲೆ ಮಾರಣಾಂತಿಕ