13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಫೆ.3 ರಿಂದ ಏಳು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಚಿತ್ರೋತ್ಸವವನ್ನು ಉದ್ಘಾಟಿಸಿ ಚಾಲನೆ ನೀಡಲಿದ್ದಾರೆ. ಬೆಂಗಳೂರಿನ ಜಿ.ಕೆ.ವಿ.ಕೆ ಸಭಾಂಗಣದಲ್ಲಿ ಸಂಜೆ 4.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಎಂ.ರಾಜೀವ್ ಚಂದ್ರಶೇಖರ್ ಗೌರವಾನ್ವಿತ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ.ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ್, ಕಂದಾಯ ಸಚಿವ