ಬೆಂಗಳೂರು : ಚಂದ್ರಯಾನ-3 ಮಿಷನ್ ಕಾರ್ಯಾಚರಣೆ ನಿರ್ಣಾಯಕ ಹಂತದಲ್ಲಿದ್ದು, ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿಯಿದೆ. ಭಾನುವಾರ (ಇಂದು) ಬೆಳಗ್ಗೆ ಅಂತಿಮ ಹಂತದ ಡಿಬೂಸ್ಟಿಂಗ್ ಕಾರ್ಯಾಚರಣೆಯೂ ಯಶಸ್ವಿಯಾಗಿ ಪೂರ್ಣಗೊಂಡಿದೆ. ಎಲ್ಲವೂ ಅಂದುಕೊಂಡಂತೆ ಆದ್ರೆ ಆಗಸ್ಟ್ 23 ರಂದು ಲ್ಯಾಂಡರ್ ವಿಕ್ರಮ್ ಚಂದ್ರನ ಅಂಗಳಕ್ಕೆ ಕಾಲಿಡಲಿದೆ.ಆಗಸ್ಟ್ 18ರಂದು ವಿಕ್ರಮ್ ಲ್ಯಾಂಡರ್ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಯಶಸ್ವಿಗೊಳಿಸಿತ್ತು. ಲ್ಯಾಂಡರ್ ಮಾಡ್ಯೂಲ್ ತನ್ನ ಕಕ್ಷೆಯನ್ನ 113