ನವದೆಹಲಿ : ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಗೆ ಸಂಪರ್ಕಿಸುವ ರಹಸ್ಯ ಸುರಂಗ ಮಾರ್ಗವನ್ನು ಪತ್ತೆ ಹಚ್ಚಲಾಗಿದೆ. ಇದು ತೀವ್ರ ಕುತೂಹಲವನ್ನು ಕೆರಳಿಸಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು ಈ ಸುರಂಗ ಮಾರ್ಗವನ್ನು ಬಳಸುತ್ತಿದ್ದರು ಎಂಬುದು ತಿಳಿದು ಬಂದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯಲ್, ಸುರಂಗ ಮಾರ್ಗವು ವಿಧಾನಸಭೆಯಿಂದ ಕೆಂಪು ಕೋಟೆಯನ್ನು ಸಂಪರ್ಕಿಸುತ್ತದೆ. ಬ್ರಿಟಿಷರು ಇದನ್ನು ಬಳಕೆ ಮಾಡುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.