ಬೆಂಗಳೂರು : ನಗರದಲ್ಲಿನ ಅನಧಿಕೃತ ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್ಗಳನ್ನು ತೆರವುಗೊಳಿಸುವ ಕೆಲಸ ಇನ್ನಷ್ಟು ವೇಗವಾಗಿ ನಡೆಯಬೇಕಿದ್ದು,ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಅಧಿಕಾರಿಗಳು ತತ್ಕ್ಷಣ ಕಾರ್ಯಪ್ರವೃತ್ತರಾಗಿ ತೆರವು ಕಾರ್ಯಾಚರಣೆ ನಡೆಸಬೇಕೆಂದು ಮುಖ್ಯ ಆಯುಕ್ತರಾದ ಗೌರವ್ ಗುಪ್ತರವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.ಪಾಲಿಕೆ ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬಂಟಿಂಗ್ಸ್ ಮತ್ತು ಬ್ಯಾನರ್ಸ್ಗಳ ತೆರವುಗೊಳಿಸುವಿಕೆ ಬಗ್ಗೆ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್ಗಳನ್ನು ವ್ಯಾಪಕವಾಗಿ ಅಳವಡಿಸಲಾಗುತ್ತಿದೆ.ಆಯಾ ವಲಯ ವ್ಯಾಪ್ತಿಯಲ್ಲಿಯ