ಮುಂಗಾರು ಈ ಬಾರಿ ತಡವಾಗಿ ಆಗಮಿಸಿದರೂ ಹಲವು ರಾಜ್ಯಗಳಲ್ಲಿ ಅನಾಹುತಗಳನ್ನು ಸೃಷ್ಟಿಸುತ್ತಿದೆ. ದೆಹಲಿಯ ಎನ್ಸಿಆರ್ನಲ್ಲಿ ಶನಿವಾರ ಬೆಳಗ್ಗೆಯಿಂದ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ.ಹಿಮಾಚಲಪ್ರದೇಶದಲ್ಲೂ ಮಳೆ ಸುರಿಯುತ್ತಿದ್ದು, ಪ್ರವಾಹ ಎಚ್ಚರಿಕೆ ನೀಡಲಾಗಿದ್ದು 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಇದಲ್ಲದೇ ಜುಲೈ 10ಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಏತನ್ಮಧ್ಯೆ, ಹಿಮಾಚಲ ಪ್ರದೇಶದ ಲಾಹೌಲ್ ಸ್ಪಿತಿಯಲ್ಲಿಯೂ ಪ್ರವಾಹ ಮತ್ತು ಹಿಮಕುಸಿತದ ಎಚ್ಚರಿಕೆಗಳನ್ನು ನೀಡಲಾಗಿದೆ.