ಆಂಧ್ರ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಭಾರಿ ಮಳೆ ಕಾರಣ ಪೆನ್ನಾ ನದಿ ಉಕ್ಕಿ ಹರಿದ ಪರಿಣಾಮ ದಕ್ಷಿಣ ಮತ್ತು ಪೂರ್ವಕ್ಕೆ ಸಂಪರ್ಕ ಕಲ್ಪಿಸುವ ಆಂಧ್ರಪ್ರದೇಶದ ಮುಖ್ಯ ರೈಲು ಮತ್ತು ರಸ್ತೆ ಮಾರ್ಗಗಳು ಕಡಿತಗೊಂಡಿವೆ. ಚೆನ್ನೈ-ಕೋಲ್ಕತ್ತಾ ರಾಷ್ಟ್ರೀಯ ಹೆದ್ದಾರಿ-16ರ ಎಸ್ಪಿಎಸ್ ನೆಲ್ಲೂರು ಜಿಲ್ಲೆಯ ಪಡುಗುಪಾಡುವಿನಲ್ಲಿ ಭಾರಿ ಪ್ರಮಾಣದ ನೀರು ಹರಿದ ಪರಿಣಾಮ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಪಡುಗುಪಾಡು ರೈಲ್ವೆ ಹಳಿಯ ಮೇಲೆ