ಗುವಾಹಟಿ : ಅಸ್ಸಾಂನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ರಣಮಳೆಗೆ ರಸ್ತೆ, ರೈಲು ಹಳಿ ಸೇರಿದಂತೆ ಹಲವು ಭಾಗಗಳಲ್ಲಿ ಗುಡ್ಡ ಕುಸಿತಗೊಂಡು 4 ಲಕ್ಷಕ್ಕೂ ಅಧಿಕ ಮಂದಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಅಸ್ಸಾಂನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ತೀವ್ರ ಪ್ರಮಾಣದ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯಾಗಿದೆ.26 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೂರಿದ್ದು, ಜನ ನೀರಿನ ಮಧ್ಯೆ ಜೀವ ಭಯದಿಂದ ರಕ್ಷಣೆಗಾಗಿ ಅಂಗಲಾಚುತ್ತಿದ್ದಾರೆ.