ಮುಂಬೈ : ಮುಂಬೈನಲ್ಲಿ ಇಂದು ಬೆಳ್ಳಂಬೆಳಗ್ಗೆ ನಿರ್ಮಾಣ ಹಂತದ ಫ್ಲೈ ಓವರ್ ಕುಸಿದು ಬಿದ್ದಿರುವ ಘಟನೆ ನಡೆದಿದ್ದು, 14 ಕಾರ್ಮಿಕರು ಗಾಯಗೊಂಡಿದ್ದಾರೆ. ಇಂದು ಮುಂಜಾನೆ 4.40ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಬಳಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಇದಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ಹಲವಾರು ಕಾರ್ಮಿಕರು ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು. ಫ್ಲೈ ಓವರ್ ಕುಸಿದ ಪರಿಣಾಮ 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲವರು ಅವಶೇಷಗಳ ಅಡಿಯಲ್ಲಿ