ವಿಜಯೇಂದ್ರನಿಗೆ ಟಿಕೆಟ್ ನೀಡಬೇಕೆಂದು ಕಾರ್ಯಕರ್ತರು ರಾಜ್ಯ ಬಿಜೆಪಿ ಉಸ್ತುವಾರಿಗಳ ಮೀಟಿಂಗ್ ನಡೆಯುತ್ತಿರುವ ಹೋಟೆಲ್ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿರುವ ಘಟನೆ ನಡೆದಿದೆ. ಖಾಸಗಿ ಹೋಟೆಲ್ ನಲ್ಲಿ ವರುಣಾ ಟಿಕಟ್ ಬಗ್ಗೆ ಕರ್ನಾಟಕ ರಾಜ್ಯ ಉಸ್ತುವಾರಿ ಹಾಗೂ ಬಿ.ಎಸ್. ಯಡಿಯೂರಪ್ಪ ನಡುವೆ ರಹಸ್ಯ ಮಾತುಕತೆ ನಡೆಯುತ್ತಿದ್ದು, ಈ ವೇಳೆ ಹೋಟೆಲ್ ಮುಂಭಾಗದಲ್ಲಿ ವಿಜಯೇಂದ್ರನಿಗೆ ಟಿಕೆಟ್ ನೀಡಬೇಕೆಂದು ಕಾರ್ಯಕರ್ತರು ಗಲಾಟೆ ಮಾಡಿ ಪ್ರತಿಭಟನೆಗೆ ಮುಂದಾದರು. ಮಧ್ಯಪ್ರವೇಶಿಸಿದ ಪೊಲೀಸರೊಂದಿಗೆ ಮಾತಿನ