ದೇಶದ 14ನೇ ರಾಷ್ಟ್ರಪತಿಯಾಗಿರುವ ರಾಮನಾಥ ಕೋವಿಂದ್ ಅವರ ಅವಧಿ ಇನ್ನು ಒಂದೂವರೆ ತಿಂಗಳಿನಲ್ಲಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ನೂತನ ರಾಷ್ಟ್ರಪತಿ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ಗುರುವಾರ ವೇಳಾಪಟ್ಟಿಪ್ರಕಟಿಸಿದೆ. ಜು.18ರಂದು ಚುನಾವಣೆ ನಡೆಯಲಿದ್ದು, ಜು.21ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ ಎಂದು ಆಯೋಗ ತಿಳಿಸಿದೆ. 2017ರಲ್ಲಿ ರಾಷ್ಟ್ರಪತಿಯಾಗಿ ಚುನಾಯಿತರಾಗಿದ್ದ ಕೋವಿಂದ್ ಅವರ ಅವಧಿ ಜು.24ಕ್ಕೆ ಮುಗಿಯಲಿದೆ. ಹೀಗಾಗಿ ಜು.25ರೊಳಗೆ ನೂತನ ರಾಷ್ಟ್ರಪತಿ ಪ್ರಮಾಣವಚನ ಸ್ವೀಕರಿಸಬೇಕಾಗಿದೆ.ಲೋಕಸಭೆ, ರಾಜ್ಯಸಭೆ ಮತ್ತು ರಾಜ್ಯಗಳ ವಿಧಾನಸಭೆಯಲ್ಲಿ