ಬೆಂಗಳೂರು : ಈಗಾಗಲೇ ತಿಳಿಸಿರುವಂತೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಯನ್ನು ಜೂನ್ 11ರಿಂದ ಆರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು.ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಸೇರಿ ಎಲ್ಲಾ ಮಹಿಳೆಯರಿಗೆ ‘ಶಕ್ತಿ’ ಯೋಜನೆ ಅನ್ವಯವಾಗಲಿದೆ. ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಹೇಳಿದರು.ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ