ಚಿಕ್ಕಮಗಳೂರು : ಆರರಿಂದ 12 ನೇ ತರಗತಿಯವರೆಗೆ ಸಂಪೂರ್ಣ ಶಾಲಾರಂಭಕ್ಕೆ ಈಗಾಗಲೇ ಮೌಖಿಕವಾಗಿ ಸೂಚನೆ ನೀಡಿದ್ದೇವೆ. ಬೆಳಗ್ಗೆಯಿಂದ ಸಂಜೆಯವರೆಗೂ ಶಾಲೆ ನಡೆಸಲು ಹೇಳಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಇಲ್ಲದೆ ಇರುವುದರಿಂದ ವಿದ್ಯಾರ್ಥಿಗಳಿಗೆ ಬಲವಂತ ಮಾಡುವಂತಿಲ್ಲ. ದಸರಾ ಹಬ್ಬದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು. ರಾಜ್ಯದ ತುಂಬಾ ಕಡೆ ಕೋವಿಡ್